Tuesday 16 September 2014

mungaru male lyrics in kannada

ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ
ನಿನ್ನ ಮುಗಿಲ ಸಾಲೇ, ಧರೆಯ ಕೊರಳ ಪ್ರೇಮದ ಮಾಲೆ
ಸುರಿವ ಒಲುಮೆಯ ಜಡಿ ಮಳೆಗೆ, ಪ್ರೀತಿ ಮೂಡಿದೆ
ಯಾವ ಚಿಪ್ಪಿನಲ್ಲಿ, ಯಾವ ಹಾನಿಯೂ ಮುತ್ತಾಗುವುದೋ
ಒಲವು ಎಲ್ಲಿ ಕುಡಿಯೋಡೆಯುವುದೋ, ತಿಳಿಯದಾಗಿದೆ
ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ

ಭುವಿ ಕೆನ್ನೆ ತುಂಬಾ, ಮುಗಿಲು ಸುರಿದ ಮುತ್ತಿನ ಗುರುತು
ನನ್ನ ಎದೆಯ ತುಂಬಾ, ಅವಳು ಬಂದ ಹೆಜ್ಜೆಯ ಗುರುತು
ಹೆಜ್ಜೆ ಗೆಜ್ಜೆಯ ಸವಿ ಸದ್ದು, ಪ್ರೇಮನಾದವೋ
ಎದೆ ಮುಗಿಲಿನಲ್ಲಿ, ರಂಗು ಚೆಲ್ಲಿ ನಿಂತಳು ಅವಳು
ಬರೆದು ಹೆಸರ ಕಾಮನಬಿಲ್ಲು, ಏನು ಮೂಡಿಯೋ
ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ.

ಯಾವ ಹನಿಗಳಿಂದ, ಯಾವ ನೆಲವು ಹಸಿರಾಗುವುದೋ
ಯಾರ ಸ್ಪರ್ಶದಿಂದ, ಯಾರಾ ಮನವು ಹಸಿಯಾಗುವುದೋ
ಯಾರ ಉಸಿರಲ್ಯಾರ ಹೆಸರೋ, ಯಾರು ಬರೆದರೋ?
ಯಾವ ಪ್ರೀತಿ ಹೂವು, ಯಾರ ಹೃದಯದಲ್ಲರಳುವುದೋ
ಯಾರ ಪ್ರೇಮ ಪೂಜೆಗೆ ಮುಡಿಪೋ, ಯಾರು ಬಲ್ಲರು
ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ

ಒಲವ ಚಂದಮಾಮ, ನಗುತ ಬಂದ ಮನದಂಗಳಕೆ
ಪ್ರೀತಿ ಬೆಳಕಿನಲ್ಲಿ, ಹೃದಯ ಹೊರಟಿದೆ ಮೆರವಣಿಗೆ
ಅವಳ ಪ್ರೇಮದೂರಿನ ಕಡೆಗೆ, ಪ್ರೀತಿ ಪಯಣವು
ಪ್ರಣಯದೂರಿನಲ್ಲಿ, ಕಳೆದು ಹೋಗೋ ಸುಖವ ಇಂದು
ಧನ್ಯನಾದೆ ಪಡೆದು ಕೊಂಡು, ಹೊಸ ಜನ್ಮವು
ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ

No comments:

Post a Comment